BIG NEWS : ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಕೇಸ್ : ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದೇನು..?

ಬೆಳಗಾವಿ : ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಹಳ ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಗೊತ್ತಾಗಿದೆ, ಹಾಗಾಗಿ ಪ್ರಕರಣ ದಾಖಲಾಗಿರಲಿಲ್ಲ. ಈಗ ದೂರು ಕೊಟ್ಟಿದ್ದಾರೆ , ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕಮಿಷನರ್ ಗೆ ಸೂಚನೆ ನೀಡಿದ್ದೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದು, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ಜನ ಕಾಮುಕರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಆರು ತಿಂಗಳ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿಕೊಂಡಿದ್ದ ದುಷ್ಕರ್ಮಿಗಳು ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಎಸಗಿದ್ದಾರೆ . ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಾರದ ಹಿಂದೆ ರೆಸಾರ್ಟ್ ವೊಂದರಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಈ ಪ್ರಕರಣದಲ್ಲಿ ಇಬ್ಬರು ಬಾಲಾಪರಾಧಿಗಳು ಸೇರಿ ಐವರ ಬಂಧನವಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಅತ್ಯಾಚಾರ ನಡೆದ ಘಟನೆ ವರದಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read