ಬೆಳಗಾವಿ : ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದ ಕೇಸ್ ಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನ ಮಣಿಕಂಠ ದಿನ್ನಿಮನಿ (28) ಈರಣ್ಣ ಸಂಕಮ್ಮನವರ (28) ಎಂದು ಗುರುತಿಸಲಾಗಿದೆ. ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಪಾಪಿಗಳು ಅತ್ಯಾಚಾರ ಎಸಗಿದ್ದರು. ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನ.23 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಬಾಲಕಿ ಕುಟುಂಬಸ್ಥರಿಗೆ ಜೀವ ಬೆದರಿಕೆಯೊಡ್ಡಿದ್ದರು. ಆದರೆ ಅವರು ದೂರು ಕೊಡಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ.
ಹಿಟ್ಟು ಮಾಡಿಸಿಕೊಂಡು ಬರಲು ಹಿಟ್ಟಿನ ಗಿರಣಿಗೆ ಹೋಗಿದ್ದ ವೇಳೆ ಆಕೆಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ನಡೆಸಲಾಗಿದೆ. ಮುರಗೋಡ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೂಡ ದೂರು ದಾಖಲಿಸಿಕೊಂಡಿದೆ.
