HomeIndiaಗ್ಯಾಂಗ್ ರೇಪ್ ಪ್ರಕರಣ: ಬಿಜೆಪಿ ಶಾಸಕನ ವಿರುದ್ಧ FIR ದಾಖಲಿಸುವಂತೆ ಕೋರ್ಟ್ ಸೂಚನೆ

ಗ್ಯಾಂಗ್ ರೇಪ್ ಪ್ರಕರಣ: ಬಿಜೆಪಿ ಶಾಸಕನ ವಿರುದ್ಧ FIR ದಾಖಲಿಸುವಂತೆ ಕೋರ್ಟ್ ಸೂಚನೆ

ಬದೌನ್: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಶಕ್ಯ ಸೇರಿದಂತೆ 16 ಜನರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಉತ್ತರ ಪ್ರದೇಶದ ಬದೌನ್ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ.

ಸಂತ್ರಸ್ತೆಯ ಪತಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಶಾಸಕ ಹರೀಶ್ ಶಕ್ಯ, ಅವರ ಸಹೋದರ ಹಾಗೂ ಸೋದರಳಿಯ ಸೇರಿದಂತೆ 16 ಜನರ ವಿರುದ್ಧ ಎಫ್ ಐ ಅರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದೆ.

ಬುಧ್ ಬಾಯ್ ಗ್ರಾಮದಲ್ಲಿ ದೂರುದಾರರ ತಂದೆ ಖರೀದಿಸಿದ್ದ ಭೂಮಿಯನ್ನು ಶಾಸಕ ಶಕ್ಯ ಖರೀದಿ ಮಾಡಲು ಮುಂದಾಗಿದ್ದರು. ಈ ವೇಳೆ ಮಹಿಳೆ ಮೇಲೆ ಶಾಸಕ ಶಕ್ಯ ಸೇರಿ ಹಲವರು ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ಪತಿ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ 10 ದಿನಗಲೋಳಗೆ ಪ್ರಕರಣ ದಾಖಲಿಸಿ, ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಕೋರ್ಟ್ ಸಿವಿಲ್ ಲೈನ್ ಠಾಣೆಯ ಪೊಲೀಸರಿಗೆ ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular