ಪಟ್ನಾ: ವಿಕಲಚೇತನ ತಂದೆಯನ್ನು ಆಸ್ಪತ್ರೆಗೆ ಕರೆದಿಯ್ಯಲೆಂದು ಟ್ರೇನ್ ಗಾಗಿ ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದ ಯುವತಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ಬಿಹಾರದ ಗೋಪಾಲಗಂಜ್ ನಲ್ಲಿ ನಡೆದಿದೆ.
ರೈಲ್ವೆ ನಿಲ್ದಾಣದಲ್ಲಿ ತಂದೆಯ ಜೊತೆ ಕುಳಿತುಕೊಂಡಿದ್ದ ಯುವತಿಯನ್ನು ಯುವಕರ ಗುಂಪು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದೆ. ಕುಚಾಯ್ಕೋಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇತರ ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಢಿವಂತೆ ಸಂತ್ರಸ್ತೆಯ ಕುಟುಂಬದವರು, ಸ್ಥಳೀಯರು ಆಗ್ರಹಿಸಿದ್ದಾರೆ.