HomeLatest NewsSHOCKING : ರೈಲಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ರೈಲು ನಿಲ್ದಾಣದಲ್ಲಿಯೇ ಗ್ಯಾಂಗ್ ರೇಪ್: ಓರ್ವ ಆರೋಪಿ...

SHOCKING : ರೈಲಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ರೈಲು ನಿಲ್ದಾಣದಲ್ಲಿಯೇ ಗ್ಯಾಂಗ್ ರೇಪ್: ಓರ್ವ ಆರೋಪಿ ಅರೆಸ್ಟ್

ಪಟ್ನಾ: ವಿಕಲಚೇತನ ತಂದೆಯನ್ನು ಆಸ್ಪತ್ರೆಗೆ ಕರೆದಿಯ್ಯಲೆಂದು ಟ್ರೇನ್ ಗಾಗಿ ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದ ಯುವತಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ಬಿಹಾರದ ಗೋಪಾಲಗಂಜ್ ನಲ್ಲಿ ನಡೆದಿದೆ.

ರೈಲ್ವೆ ನಿಲ್ದಾಣದಲ್ಲಿ ತಂದೆಯ ಜೊತೆ ಕುಳಿತುಕೊಂಡಿದ್ದ ಯುವತಿಯನ್ನು ಯುವಕರ ಗುಂಪು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದೆ. ಕುಚಾಯ್ಕೋಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇತರ ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಢಿವಂತೆ ಸಂತ್ರಸ್ತೆಯ ಕುಟುಂಬದವರು, ಸ್ಥಳೀಯರು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular