HomeLatest Newsಮಂಜಗುಣಿ-ಗಂಗಾವಳಿ ಸೇತುವೆ ಮೇಲೆ ಸರ್ಕಾರಿ ಬಸ್ ಗಳ ಸಂಚಾರಕ್ಕೆ ಮಾತ್ರ ಇಲ್ಲ ಅವಕಾಶ!

ಮಂಜಗುಣಿ-ಗಂಗಾವಳಿ ಸೇತುವೆ ಮೇಲೆ ಸರ್ಕಾರಿ ಬಸ್ ಗಳ ಸಂಚಾರಕ್ಕೆ ಮಾತ್ರ ಇಲ್ಲ ಅವಕಾಶ!

ಕಾರವಾರ: ಪ್ರಸಿದ್ಧ ಯಾತ್ರಾ ಸ್ಥಳ, ಪ್ರವಾಸಿ ತಾಣ ಗೋಕರ್ಣಕ್ಕೆ ಸಂಪರ್ಕ ಕಲ್ಪಿಸುವ ಗಂಗಾವಳಿ ಸೇತುವೆ ಮೇಲೆ ಎಲ್ಲಾ ವಾಹನಗಳ ಸಂಚಾರಕ್ಕೂ ಅವಕಾಶ ನೀಡಲಾಗಿದೆ. ಆದರೆ ಸರ್ಕಾರಿ ಬಸ್ ಗಳಿಗೆ ಮಾತ್ರ ಸೇತುವೆಯಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಗಂಗಾವಳಿ ನದಿಗೆ ಕಟ್ಟಲಾಗಿರುವ ಮಂಜಗುಣಿ-ಗಂಗಾವಳಿ ಸೇತುವೆ ೭ ವರ್ಷಗಳ ಬಳಿಕ ಪೂರ್ಣಗೊಂಡು, ಸಂಚಾರಕ್ಕೆ ಮುಕ್ತವಾಗಿದೆ. ಈ ಸೇತುವೆಯಲ್ಲಿ ಎಲ್ಲಾ ವಿಧದ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಸರ್ಕಾರಿ ಬಸ್ ಗಳಿಗೆ ಮಾತ್ರ ನಿರ್ಬಂಧ ವಿಧಿಸಿರುವುದು ಅಚ್ಚರಿಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಯುವ್ಯ ರಸ್ತೆ ಸಾರಿಗೆ ಬಸ್ ಗಳಿಗೆ ಈ ಭಾಗದಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಕಾರಣ ಕೇಳಿದರೆ ಅಧಿಕಾರಿಗಳ ಬಳಿಯೂ ಸೂಕ್ತ ಉತ್ತರವಿಲ್ಲ. ಸೇತುವೆ ಅಧಿಕೃತವಾಗಿ ಉದ್ಘಾಟನೆಯಾದಾ ಬಳ್ಳಿಕ ಸಂಚಾರಕ್ಕೆ ಅವಕಾಶ ಕೊಡಬಹುದು ಎಂಬ ಮಾತು ಕೇಳಿಬರುತ್ತಿದೆ.

ಕಳೆದ ಡಿಸೆಂಬರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಗಾವಳಿ ಸೇತುವೆ ಉದ್ಘಾಟನೆ ಮಾಡಬೇಕಿತ್ತು. ಆದರೆ ಕಾರಣಾಂತರದಿಂದ ಸಾಧ್ಯವಾಗಿಲ್ಲ. ಹಾಗಾಗಿ ಸರ್ಕಾರಿ ಬಸ್ ಗಳ ಸಂಚಾರಕ್ಕೆ ನಿರ್ಬಂಧವಿದೆ ಎಂಬ ಮಾತು ಕೇಳಿಬರುತ್ತಿದೆ. 28.71 ಕೋಟಿ ವೆಚ್ಚದಲ್ಲಿ ಗಂಗಾವಳಿ ಸೇತುವೆ ನಿರ್ಮಾಣವಾಗಿ ಜನರ ಸಂಚಾರಕ್ಕೆ ಸುಗಮವಾಯಿತು ಎಂದು ಈ ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ ಸರ್ಕಾರಿ ಬಸ್ ಗಳ ಸಂಚಾರಕ್ಕೆ ಅವಕಾಶವಿಲ್ಲದಿರುವುದು ಜನರಿಗೆ ಸಂಕಷ್ಟವನ್ನು ತಂದೊಡ್ದಿದೆ. ಈ ಭಾಗದಲ್ಲಿ ಬಸ್ ಗಳು ಪ್ರಯಾಣಿಕರನ್ನು ತಂದು ಗಂಗಾವಳಿ ಸೇತುವೆವರೆಗೆ ಬಿಟ್ಟು ಹೋಗುತ್ತಿವೆ. ಇದರಿಂದ ಪ್ರತಿದಿನ ಈ ಭಾಗದಲ್ಲಿ ಸಂಚರಿಸುವ ವಿದ್ಯಾರ್ಥಿಗಳು, ಗ್ರಾಮಸ್ಥರು ಪರದಾಡುವಂತಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular