HomeKarnatakaಗಂಗಾವತಿಗೆ ಅಂಜನಾದ್ರಿ, ಬಾನಾಪುರ ನಿಲ್ದಾಣಕ್ಕೆ ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರು ನಾಮಕರಣಕ್ಕೆ ಶಿಫಾರಸು

ಗಂಗಾವತಿಗೆ ಅಂಜನಾದ್ರಿ, ಬಾನಾಪುರ ನಿಲ್ದಾಣಕ್ಕೆ ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರು ನಾಮಕರಣಕ್ಕೆ ಶಿಫಾರಸು

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ಎಂದು ನಾಮಕರಣ ಮಾಡಲು ಶಿಫಾರಸು ಮಾಡಲಾಗಿದೆ.

ಮುನಿರಾಬಾದ್ ರೈಲು ನಿಲ್ದಾಣಕ್ಕೆ ಹುಲಿಗೆಮ್ಮದೇವಿ, ಬಾನಾಪುರ ರೈಲು ನಿಲ್ದಾಣಕ್ಕೆ ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರು ನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಿಫಾರಸು ಕಳುಹಿಸಲಾಗಿದ್ದು, ಅವರ ಮೂಲಕ ಇದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿಕೊಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಗಂಗಾವತಿ, ಮುನಿರಾಬಾದ್, ಬಾನಾಪುರ ರೈಲು ನಿಲ್ದಾಣಗಳಿಗೆ ಮರು ನಾಮಕರಣ ಮಾಡುವುದರ ಮೂಲಕ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದೆ. ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular