HomeKarnatakaವಸತಿ ಶಾಲೆಯಲ್ಲಿ ರ್ಯಾಗಿಂಗ್: 5 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ

ವಸತಿ ಶಾಲೆಯಲ್ಲಿ ರ್ಯಾಗಿಂಗ್: 5 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ

ಗಂಗಾವತಿ: ಗಂಗಾವತಿ ತಾಲೂಕಿನ ಹೇಮಗುಡ್ಡ ಸಮೀಪದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿದೆ. ರ್ಯಾಗಿಂಗ್ ಮಾಡಿದ ಐವರು ವಿದ್ಯಾರ್ಥಿಗಳ ವಿರುದ್ಧ ಶಾಲಾ ಆಡಳಿತ ಮಂಡಳಿ ಶಿಸ್ತು ಕ್ರಮಕ್ಕೆ ಮುಂದಾಗಿದೆ.

ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರರಿಂದ ಹತ್ತನೇ ತರಗತಿವರೆಗೆ ಓದುತ್ತಿರುವ ಮಕ್ಕಳಿದ್ದಾರೆ. ಎಸ್ಎಸ್ಎಲ್ಸಿಯಲ್ಲಿ 24 ವಿದ್ಯಾರ್ಥಿಗಳಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡುವ ಬಗ್ಗೆ ಆರರಿಂದ ಎಂಟನೇ ತರಗತಿವರೆಗಿನ ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದರು.

ಪೋಷಕರು ಭಾನುವಾರ ಶಾಲೆಗೆ ಬಂದು ಶಾಲಾ ಆಡಳಿತ ಮಂಡಳಿಯವರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗಳನ್ನು ವಿಚಾರಿಸಿದಾಗ ನಡೆದಿರುವುದು ಗೊತ್ತಾಗಿದ್ದು, ಶಾಲಾ ಆಡಳಿತ ಮಂಡಳಿ ಶಿಸ್ತು ಕ್ರಮಕ್ಕೆ ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular