HomeKarnatakaBIG NEWS: ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಪ್ರಕಟ

BIG NEWS: ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಪ್ರಕಟ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಕೊಲೆ ಪ್ರಕರಣದ ಅಪರಾಧಿಗಳಾದ ರವಿ , ವಿಜಯ್ ಅಲಿಯಾದ್ ಮೈಲಾರಿ, ಧನರಾಜ್, ಭೀಮ್‌ ಅಲಿಯಾದ್ ಭರತ್, ಸಲೀಮ್ ಮಹಮ್ಮದ್ ರಫೀಕ್, ಗಂಗಾಧರ ಗೌಳಿಗೆ ಗಲ್ಲು ಶಿಕ್ಷೆಗೆ ಗುರಿಯಾದವರು. ಗಲ್ಲು ಶಿಕ್ಷೆ ಜೊತೆಗೆ ತಲಾ 3 ಲಕ್ಷ ದಂಡವನ್ನು ವಿಧಿಸಿ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ ಆದೇಶ ಹೊರಡಿಸಿದ್ದಾರೆ/

ಮೊದಲಿಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್​ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಗಾವತಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದ ಮಾರುತಿ ಎಂಬ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣದಲ್ಲಿ ವೆಂಕಟೇಶ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಲ್ಲದೇ ಮಾರುತಿ ಚಿಕಿತ್ಸೆಗೆ ಕೊನೆಯವರೆಗೂ ಬೆಂಬಲವಾಗಿ ನಿಂತಿದ್ದ ಎಂಬ ಕಾರಣಕ್ಕೆ ವೆಂಕಟೇಶನನ್ನು ಕೊಲೆ ಮಾಡಿದ್ದೀರಿ. ಸಭ್ಯ ನಾಗರಿಕ ಸಮಾಜದ ಇಂತಹ ಕೃತ್ಯಗಳನ್ನು ಒಪ್ಪುವುದಿಲ್ಲ. ಅಪರಾಧ ಕೃತ್ಯಗಳ ಹಿನ್ನೆಲೆ ಪರಿಗಣಿಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಲಾಗಿದೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

2025ರ ಅಕ್ಟೋಬರ್ 8ರ ಮಧ್ಯರಾತ್ರಿ ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ (32) ಅವರನ್ನು ಗಂಗಾವತಿ ನಗರದ ಹೊರ ವಲಯದಲ್ಲಿರುವ ರಾಣಾ ಪ್ರತಾಪ್​ ಸಿಂಗ್ ವೃತ್ತದಲ್ಲಿರುವ ಖಾಸಗಿ ಆಸ್ಪತ್ರೆಯ ಬಳಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು.

ತಡರಾತ್ರಿ ಊಟ ಮುಗಿಸಿಕೊಂಡು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ವೆಂಕಟೇಶ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಹಿಂಬಾಲಿಸಿದ ಯುವಕರ ಗುಂಪು, ದ್ವಿಚಕ್ರ ವಾಹನಕ್ಕೆ ಗುದ್ದಿ ಬೀಳಿಸಿದ್ದರು. ಬಳಿಕ ಕೆಳಕ್ಕೆ ಬಿದ್ದ ವೆಂಕಟೇಶನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮನಬದಂತೆ ಕೊಚ್ಚಿ ಕೊಲೆ ಮಾಡಿದ್ದರು. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೆಂಕಟೇಶನನ್ನು ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಈ ಕೊಲೆ ಕೇಸ್ ಗೆ ಸಂಭಂದಿಸಿದಂತೆ ಗಂಗಾವತಿ ನಗರ ಪೊಲೀಸರು, 12 ಆರೋಪಿಗಳನ್ನು ಬಂಧಿಸಿದ್ದು, ಸುಮಾರು 927 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. ಹಳೆಯ ದ್ವೇಷ ಮತ್ತು ಮಾರುತಿ ಎಂಬ ವ್ಯಕ್ತಿಯ ಚಿಕಿತ್ಸೆಗೆ ನೆರವಾಗಿದ್ದು ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular