HomeKarnatakaಗಾಂಜಾ ಸಾಗಣೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಗಾಂಜಾ ಸಾಗಣೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಚಿತ್ರದುರ್ಗ: ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ 2 ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿ 2 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಹಿರಿಯೂರು ತಾಲೂಕು ಗಾರೇದಿಂಡು ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ಕಂದಿಕೆರೆ ಗ್ರಾಮದ ಯಶವಂತ, ಹಿರಿಯೂರು ಪಟ್ಟಣದ ಭರತ್ ಹೆಚ್.ಎನ್. ಅವರನ್ನು ಬಂಧಿಸಿ 300 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕಿ ವನಿತಾ ಎ., ಉಪನಿರೀಕ್ಷಕ ನಾಗರಾಜ, ಅಬಕಾರಿ ಕಾನ್ಸ್ಟೇಬಲ್ ರಾಮಾಂಜನೇಯ, ವಾಹನ ಚಾಲಕ ನಾಗರಾಜ ಕೆ. ತೋಳಮಟ್ಟಿ ಪಾಲ್ಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊಳಕಾಲ್ಮೂರು ತಾಲೂಕಿನ ವೆಂಕಟಾಪುರ ಗ್ರಾಮದ ಹಡಗಿಲಿ ಬಳಿ ದ್ವಿಚಕ್ರ ವಾಹನದಲ್ಲಿ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ಆಂದ್ರ ಪ್ರದೇಶದ ರಾಯದುರ್ಗ ತಾಲ್ಲೂಕಿನ ಮಲ್ಲಪ್ಪ, ಗೊಲ್ಲ ಕೆಂಜಡಪ್ಪ ಅವರನ್ನು ಬಂಧಿಸಿ 1726 ಗ್ರಾಂ ಗಾಂಜಾ ವಶಪಡಿಸಿಕೊಳ್ಳಾಗಿದೆ. ಕಾರ್ಯಾಚರಣೆಯಲ್ಲಿ ಜಿಲ್ಲಾ ವಿಚಕ್ಷಣಾ ದಳದ ಅಬಕಾರಿ ಉಪನಿರೀಕ್ಷಕ ಸಿದ್ದೇಶ್ ನಾಯ್ಕ್ ಕೆ., ಅಬಕಾರಿ ಕಾನ್ಸ್ಟೇಬಲ್ ಬಸವರಾಜ.ಜೆ. ವಾಹನ ಚಾಲಕ ಎಸ್. ತಿಪ್ಪೆಸ್ವಾಮಿ ಪಾಲ್ಗೊಂಡಿದ್ದರು.

ಸದರಿ ಪ್ರಕರಣಗಳಲ್ಲಿ ಆರೋಪಿಗಳ ವೈದ್ಯಕೀಯ ತಪಾಸಣೆ ಮಾಡಿ ಎನ್.ಡಿ.ಪಿ.ಎಸ್(ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್) ಕಾಯ್ದೆ ಅನುಸಾರ ಪ್ರಕರಣ ದಾಖಲಿಸಲಾಗಿದೆ. ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular