HomeKarnatakaಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅರೆಸ್ಟ್

ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅರೆಸ್ಟ್

ಹುಬ್ಬಳ್ಳಿ: ಗಾಂಜಾ ಮಾರುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐದು ಮಂದಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಮಂಟೂರ ರಸ್ತೆ ಬಳಿಯ ರೈಲ್ವೆ ಗೇಟ್ ಸಮೀಪ ಇವರನ್ನು ಬಂಧಿಸಲಾಗಿದೆ.

ಬಂಧಿತರ ಬಳಿ ಇದ್ದ ಮೂರು ಲಕ್ಷ ರೂಪಾಯಿ ಮೌಲ್ಯದ 3 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ವೀರಾಪುರ ಓಣಿಯ ಮುಬಾರಕ್, ಕೇಶವಾಪುರದ ಚಂದ್ರಶೇಖರ್, ರಾಮಲಿಂಗೇಶ್ವರ ನಗರದ ತೌಶಿಫ್ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ.

ಇವರು ಹೊರ ರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಇನ್ ಸ್ಪೆಕ್ಟರ್ ಅಲಿ ಶೇಖ್, ಪಿಎಸ್ಐ ಶರಣ ದೇಸಾಯಿ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದ್ದು, ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಅಪ್ರಾಪ್ತರನ್ನು ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ. ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಂಡಿಗೇರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular