ವಿಜಯನಗರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ.
ಕೊಪ್ಪಳ ಮೂಲದ ರಾಘವೇಂದ್ರ ನಾಯಕ, ಮಂಜಪ್ಪ, ಹೊಸಪೇಟೆಯ ಹುಸೇನ್ ಬಾಷಾ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಬಂಧಿತರಿಂದ 378 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
			 
		 
		 
		 
		 Loading ...
 Loading ... 
		 
		 
		