HomeKarnatakaBREAKING NEWS: ಗೂಡ್ಸ್, ಟೆಂಪೊಗಳಲ್ಲಿ ಗಾಂಜಾ ಸಾಗಾಟ-ಮಾರಾಟ; ಖತರ್ನಾಕ್ ಆರೋಪಿ ಅರೆಸ್ಟ್

BREAKING NEWS: ಗೂಡ್ಸ್, ಟೆಂಪೊಗಳಲ್ಲಿ ಗಾಂಜಾ ಸಾಗಾಟ-ಮಾರಾಟ; ಖತರ್ನಾಕ್ ಆರೋಪಿ ಅರೆಸ್ಟ್

ಮಂಗಳೂರು: ಅಂತರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿವಾಸಿ ನಿಶಾಂತ್ ಶೆಟ್ಟಿ ಬಂಧಿತ ಆರೋಪಿ. ಈತ ವಿಶಾಖಪಟ್ಟಣಂ ನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ. ಗೂಡ್ಸ್, ಟೆಂಪೋಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬಂಧಿತನಿಂದ 1.50 ಲಕ್ಷ ಮೌಲ್ಯದ 6 ಕೆ.ಜಿ.ಗಾಂಜಾ ಹಾಗೂ 9.11 ಲಕ್ಷ ಮೌಲ್ಯದ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular