ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗಾಂಜಾ ಮತ್ತಲ್ಲಿ ಪುಂಡರ ಗುಂಪೊಂದು ಮಕ್ಕಳನ್ನು ಮನಬಂದಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದ ಬಳಿ ಈ ಘಟನೆ ನಡೆದಿದೆ. ಕೇಂದ್ರೀಯ ವಿದ್ಯಾಲಯದ ಬಳಿ ನಿಂತಿದ್ದ ಮಕ್ಕಳ ಮೇಲೆ ಪುಂಡರು ಮನಬಂದಂತೆ ಥಳಿಸಿದ್ದು, ಗಾಂಜಾ ಮತ್ತಲ್ಲಿ ಈರೀತಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಫ್ರಾನ್ಸಿಸ್, ಮರಿಯದಾಸ್ ಹಾಗೂ ಬಲರಾಮ್ ಎಂಬುವವರು ಶಾಲೆ ಬಳಿ ನಿಂತಿದ್ದ ವಿದ್ಯಾರ್ಥಿಯನ್ನು ಹಿಡಿದು ಮನಸೋ ಇಚ್ಛೆ ಹೊಡೆದಿದ್ದಾರೆ. ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.

 
			 
		 
		 
		 
		 Loading ...
 Loading ... 
		 
		 
		