ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಡಿಗೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಧುಗಿರಿ ತಾಲೂಕಿನ ಕಸಿನಾಯಕನಹಳ್ಳಿ ಗೇಟ್ ಸಮೀಪ ಆರೋಪಿಗಳನ್ನು ಬಂಧಿಸಲಾಗಿದೆ. ಜಿಲಾನ್(30), ಕಲ್ಯಾಣಕುಮಾರ್(27), ಚರಣ್(26) ಬಂಧಿತ ಆರೋಪಿಗಳು. ಮಧುಗಿರಿ -ಹಿಂದೂಪುರ ರಸ್ತೆಯಲ್ಲಿ ಕಸಿನಾಯಕನಹಳ್ಳಿಯ ಗೇಟ್ ಸಮೀಪ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೊಡಿಗೇನಹಳ್ಳಿ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳು ಮಧುಗಿರಿ ಮತ್ತು ಚಿಕ್ಕಬಳ್ಳಾಪುರದವರಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

