
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಬಂಧಿತರನ್ನು ಅಭಿಷೇಕ್ (23) ಆದರ್ಶ (23) ಉದಯ್ ಕುಮಾರ್ (22) ಎಂದು ಗುರುತಿಸಲಾಗಿದೆ.
ಬಂಧಿತರಿಂದ 190 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

