ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಎಸ್.ಜಿ. ಕೋಟೆ ಸಮೀಪ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾರೇಜ್ ಗೆ ಬೆಂಕಿ ತಗುಲಿದ್ದು, 5 ಕಾರುಗಳು ಸುಟ್ಟು ಹೋಗಿವೆ.
ಈರಣ್ಣ ಎಂಬುವರಿಗೆ ಸೇರಿದ ಚೌಡೇಶ್ವರಿ ಕಾರ್ ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. 3 ಕಾರುಗಳು ಸುಟ್ಟು ಭಸ್ಮವಾಗಿದ್ದು, ಹೊರಗೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಭಾಗಶಃ ಹಾನಿಯಾಗಿದೆ. ಬೆಂಕಿ ತಹುಲಿದ್ದರಿಂದ ಸರ್ವಿಸ್ ಸೆಂಟರ್ ಹಾನಿಗೀಡಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಸರ್ವಿಸ್ ಸೆಂಟರ್ ಕಟ್ಟಡ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳು ಹಾನಿಯಾಗಿವೆ. ಬಂಗಾರಪೇಟೆ ಅಗ್ನಿಶಾಮಕ ದಳ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ. ಬಂಗಾರಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

