HomeKarnatakaBREAKING: ಜಿಬಿಎ ಕಸದ ಲಾರಿಗೆ ಮತ್ತೊಂದು ಬಲಿ: ಬೆಂಗಳೂರಿನಲ್ಲಿ ಘೋರ ಘಟನೆ

BREAKING: ಜಿಬಿಎ ಕಸದ ಲಾರಿಗೆ ಮತ್ತೊಂದು ಬಲಿ: ಬೆಂಗಳೂರಿನಲ್ಲಿ ಘೋರ ಘಟನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಸದ ಲಾರಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಬೈಕ್ ನಿಂದ ಬಿದ್ದಿದ್ದ ವ್ಯಕ್ರಿ ಮೇಲೆಯೇ ಕಸದ ಲಾರಿ ಹರಿದು ಹೋಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

35 ವರ್ಷದ ವ್ಯಕ್ತಿ ಮೃತ ದುರ್ದೈವಿ. ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಇದೇ ವೇಳೆ ವೇಗವಾಗಿ ಬಂದ ಕಸದ ಲಾರಿ ವ್ಯಕ್ತಿಯ ಮೇಲೆ ಹರಿದಿದೆ.

ಲಾರಿ ಚಕ್ರದ ಅಡಿ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಮಿಳುನಾಡು ನೋಂದಣಿ ಸಂಖ್ಯೆಯಿರುವ ಬೈಕ್ ಇದಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular