ರಾಯಚೂರು: ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಕಸ ವಿಲೇವಾರಿ ವಾಹನವನ್ನು ಕಳ್ಳರು ಹೊತ್ತೊಯ್ದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕವಿತಾಳದಲ್ಲಿ ಪಟ್ಟಣ ಪಂಚಾಯಿತಿ ಕಚೇರಿಯ ಗೇಟ್ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಕಸದ ಲಾರಿಯನ್ನು ಕದ್ದು ಪರಾರಿಯಾಗಿದ್ದಾರೆ.
ಲಾರಿ ಕದಿಯುವ ಗಾಬರಿಯಲ್ಲಿ ಪಟ್ಟಣ ಪಂಚಾಯಿತಿ ಕಚೇರಿಯ ಕಾಂಪೌಂಡ್ ಗೋಡೆಗೆ ವಾಹನ ಡಿಕ್ಕಿಯಾಗಿದೆ. ಆದಾಗ್ಯೂ ಕಳ್ಳರು ಲಾರಿಯೊಂದಿಗೆ ಎಸ್ಕೇಪ್ ಆಗಿದ್ದಾರೆ. ಡೀಸೆಲ್ ಸಮಸ್ಯೆಯಿಂದಾಗಿ ಕಚೇರಿ ಆವರಣದಲ್ಲಿಯೇ ಎಲ್ಲಾ ಕಸ ವಿಲೇವಾರಿ ಮಾಡುವ ವಾಹನಗಳು ನಿಂತಿದ್ದವು. ಕೆಲ ದಿನಗಳ ಹಿಂದಷ್ಟೇ ಹಣ ಬಿಡುಗಡೆ ಮಾಡಿ ಎಲ್ಲಾ ವಾಹನಗಳಿಗೂ ಇನ್ಶೂರೆನ್ಸ್ ಮಾಡಿಸಲಾಗಿತ್ತು. ನಾಲ್ಕು ಕಸ ವಿಲೇವಾರಿ ವಾಹನಗಳಲ್ಲಿ ಒಂದು ವಾಹನವನ್ನು ಕಳ್ಳರು ಕದ್ದೊಯ್ದಿದ್ದಾರೆ. 8 ಲಕ್ಷ ಮೌಲ್ಯದ ಕಸ ವಿಲೇವಾರಿ ಲಾರಿ ಕಳುವಾಗಿದೆ.