HomeKarnatakaBIG NEWS: ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಆರೋಪಿ ಮೇಲೆ ಪೊಲೀಸ್ ಫೈರಿಂಗ್

BIG NEWS: ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಉಡುಪಿ: ತಪ್ಪಿಸಿಕೊಂಡಿದ್ದ ನಟೋರಿಯಸ್ ರೌಡಿ ಗರುಡ ಗ್ಯಾಂಗ್ ನ ಇಸಾಕ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಈ ಹಿಂದೆ ಇಸಾಕ್ ನನ್ನು ಮಣಿಪಾಲ್ ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿ ತಪ್ಪಿಸಿಕೊಂಡು ಪರಾರಿಯಾಗಿದ್ದ. ಹಾಸನದ ಚನ್ನರಾಯಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಹಿಡಿದು ವಿಚಾರಣೆಗೆಂದು ಉಡುಪಿಗೆ ಕರೆತರುತ್ತಿದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ. ಈ ವೇಳೆ ಮೂವರು ಪೊಲೀಸರಿಗೆ ಗಾಯಗಳಾಗಿವೆ.

ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಗಾಯಾಳು ಪೊಲೀಸರನ್ನು ಕೆಎಂಸಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular