ಬೆಂಗಳೂರು : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಓರ್ವ ಮೃತಪಟ್ಟ ಘಟನೆ ಬೆಂಗಳೂರಿನ ಕೆ ಆರ್ ಪುರಂನ ತ್ರಿವೇಣಿನಗರದಲ್ಲಿ ನಡೆದಿದೆ.
ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿದ್ದು, ಸಿಲಿಂಡರ್ ಸ್ಪೋಟದ ರಭಸಕ್ಕೆ ಮನೆ ಛಿದ್ರ ಛಿದ್ರವಾಗಿದೆ. ಸ್ಪೋಟದ ರಭಸಕ್ಕೆ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಕೆ ಆರ್ ಪುರಂನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂದು ಬೆಳಗ್ಗೆ 7 :30 ರ ವೇಳೆಗೆ ಈ ಅವಘಡ ನಡೆದಿದೆ. ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿದೆ.
