BREAKING: ಹಳಿ ಮೇಲಿದ್ದ ಗ್ಯಾಸ್ ಸಿಲಿಂಡರ್ ಗೆ ರೈಲು ಡಿಕ್ಕಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಕಾನ್ಪುರ್: ಕಾನ್ಪುರ ಬಳಿ ರೈಲ್ವೆ ಹಳಿಯಲ್ಲಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದು, ಸಕಾಲಿಕ ಕ್ರಮದಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತವನ್ನು ತಪ್ಪಿಸಲಾಗಿದೆ.

ಪ್ರಯಾಗ್‌ರಾಜ್‌ನಿಂದ ಹರಿಯಾಣದ ಭಿವಾನಿಗೆ ತೆರಳುತ್ತಿದ್ದ ಕಾಳಿಂದಿ ಎಕ್ಸ್‌ ಪ್ರೆಸ್ ಭಾನುವಾರ ಉತ್ತರ ಪ್ರದೇಶದಲ್ಲಿ ಟ್ರ್ಯಾಕ್‌ ನಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗೆ ಡಿಕ್ಕಿ ಹೊಡೆದಿದೆ. ಆದರೆ, ಅಪಘಾತ ತಪ್ಪಿದೆ.

ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಸಿಲಿಂಡರ್ ಸುಮಾರು 50 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದೆ. ಕಾನ್ಪುರ-ಕಾಸ್‌ಗಂಜ್ ಮಾರ್ಗದ ಬರ್ರಾಜ್‌ಪುರ ಮತ್ತು ಬಿಲ್‌ಹೌರ್ ನಿಲ್ದಾಣಗಳ ನಡುವಿನ ಮುಂಡೇರಿ ಗ್ರಾಮದ ಕ್ರಾಸಿಂಗ್ ಬಳಿ ಸಿಲಿಂಡರ್ ಇರಿಸಲಾಗಿತ್ತು. ಸುಮಾರು 20 ನಿಮಿಷಗಳ ಕಾಲ ರೈಲನ್ನು ಸ್ಥಗಿತಗೊಳಿಸಲಾಗಿದ್ದು, ರೈಲ್ವೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ಪರಿಶೀಲನೆ ವೇಳೆ ಟ್ರ್ಯಾಕ್ ಬಳಿ ಇತರ ಕೆಲವು ವಸ್ತುಗಳು ಸಹ ಕಂಡುಬಂದಿವೆ. ರೈಲ್ವೆ ಪೊಲೀಸ್ ಫೋರ್ಸ್(ಆರ್‌ಪಿಎಫ್) ಮತ್ತು ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್‌ಪಿ) ತಂಡಗಳು ಘಟನೆಯ ಕುರಿತು ತನಿಖೆ ಕೈಗೊಂಡಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read