ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 78 ಡಾಲರ್ ಗಿಂತ ಹೆಚ್ಚಳವಾಗಿದೆ. ಇದು ಅಗತ್ಯ ವಸ್ತುಗಳು ಮತ್ತು ಗ್ಯಾಸ್ ಸಿಲಿಂಡರ್ ದರ ಹೆಚ್ಚಳಕ್ಕೆ ಕಾರಣವಾಗುವ ಸಾಧ್ಯತೆ ಇದೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(FKCCI) ಈ ಕುರಿತಾಗಿ ಆತಂಕ ವ್ಯಕ್ತಪಡಿಸಿದೆ. ಮಹಾ ಸಂಸ್ಥೆಯ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಅವರು ಈ ಕುರಿತು ಹೇಳಿಕೆ ನೀಡಿದ್ದು, ಇರಾನ್ –ಇಸ್ರೇಲ್ ಸಂಘರ್ಷದಿಂದಾಗಿ ತೈಲ ಬೆಲೆ ಏರಿಕೆಯಾಗಿದೆ. ಅಲ್ಲದೆ, ಜನಸಾಮಾನ್ಯರು ಬಳಸುವ ಗ್ಯಾಸ್ ಸಿಲಿಂಡರ್ ದರ ಸುಮಾರು 100 ರೂಪಾಯಿಯಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.