ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗಂಗಮ್ಮ ಮೃತ ಶಿಕ್ಷಕಿ. ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿದ್ದ ಗಂಗಮ್ಮ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಜುಲೈ ೨೪ರಂದು ಹುಬ್ಬಳ್ಳಿಯ ಶಕ್ತಿನಗರದ ನಿವಾಸದಲ್ಲಿ ಅಡುಗೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಂಗಮ್ಮ ಅವರ ದೇಹದ ಶೇ.65ರಷ್ಟು ಭಾಗ ಸುಟ್ಟುಹೋಗಿತ್ತು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗಂಗಮ್ಮ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಇನ್ನೂ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.
ಹುಬ್ಬಳ್ಳಿ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.