ರಾಮನಗರ: ಗ್ಯಾಸ್ ಲೀಕ್ ಆಗಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 7 ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಬಿಡದಿ ಬಳಿಯ ಕಾಡುಮನೆ ಸರ್ಕಲ್ ಬಳಿ ನಡೆದಿದೆ.
ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಶೆಡ್ ವೊಂದರಲ್ಲಿ ಈ ಘಟನೆ ನಡೆದಿದೆ. ಶೆಡ್ ನಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಶೆಡ್ ನಲ್ಲಿ ವಾಸವಾಗಿದ್ದ 7 ಕಾರ್ಮಿಕರಿಗೆ ಗಂಭೀರವಾದ ಸುಟ್ಟಗಾಯಗಳಾಗಿವೆ.
ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್ ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.