HomeKarnatakaBREAKING NEWS: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸೀಟ್ ನಲ್ಲಿಯೇ ಸಿಲುಕಿ ಚಾಲಕನ...

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸೀಟ್ ನಲ್ಲಿಯೇ ಸಿಲುಕಿ ಚಾಲಕನ ಪರದಾಟ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿರುವ ಘಟನೆ ಹಾಸನ ಹೊರವಲಯದ ಸಮುದ್ರವಳ್ಳಿ ಬಳಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KA-01 AM-2362 ನಂಬರ್‌ನ ಗ್ಯಾಸ್ ಟ್ಯಾಂಕರ್ ಸಮುದ್ರವಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾಗಿ ಬಿದ್ದಿದೆ. ಚಾಲಕ ಡ್ರೈವಿಂಗ್ ಸೀಟ್‌ನಲ್ಲಿ ಸಿಲುಕಿ ಹೊರಬರಲಾಗದೇ ಪರದಾಟ ನಡೆಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಡ್ರೈವರ್‌ನನ್ನು ರಕ್ಷಿಸಿದ್ದಾರೆ. ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕೆಲ ಕಾಲ ಹೆದ್ದಾರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬಂದಿ ಗ್ಯಾಸ್ ಟ್ಯಾಂಕರ್ ತೆರವುಗೊಳಿಸಿದ್ದಾರೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular