ಸಿಂಪಲ್ ಸುನಿ ನಿರ್ದೇಶನದ ದುಷ್ಯಂತ್ ಹಾಗೂ ಆಶಿಕಾ ರಂಗನಾಥ್ ಅಭಿನಯದ ‘ಗತವೈಭವ’ ಚಿತ್ರದ ಶೂಟಿಂಗ್ ನಿನ್ನೆಗೆ ಮುಕ್ತಾಯಗೊಂಡಿದೆ. ಈ ಕುರಿತು ಸಿಂಪಲ್ ಸುನಿ ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದು, 2025ರ ಮೊದಲಾರ್ಧದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ಈ ಚಿತ್ರವನ್ನು ನಿರ್ದೇಶಕ ಸಿಂಪಲ್ ಸುನಿ ಹಾಗೂ ದೀಪಕ್ ತಿಮ್ಮಪ್ಪ ನಿರ್ಮಾಣ ಮಾಡಿದ್ದು, ಜೂಡಾ ಸ್ಯಾಂಡಿ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಆಶಿಕ್ ಕುಸುಗೊಳ್ಳಿ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ, ಹಾಗೂ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣವಿದೆ. ಇನ್ನುಳಿದಂತೆ ಚಿರು ಎಸ್ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.