ಬೆಂಗಳೂರು- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಗಂಭೀರ ಆರೋಪ ಎದುರಿಸುತ್ತಿದ್ದ ಉಡುಪಿ ಮೂಲದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಬೆಂಗಳೂರಿನ 59ನೇ ಸಿಸಿಹೆಚ್ (CCH) ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪೊಲೀಸರ ವಶದಿಂದ ತಪ್ಪಿಸಿಕೊಳ್ಳಲು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಗೌರವ್ ಶೆಟ್ಟಿ ಪರ ವಕೀಲರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಇದರೊಂದಿಗೆ, ಶೀಘ್ರದಲ್ಲೇ ಆರೋಪಿಯು ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಹಾಗೂ ಸಾಕ್ಷ್ಯ ಸಂಗ್ರಹಣೆ ಪ್ರಕ್ರಿಯೆ ಚಾಲ್ತಿಯಲ್ಲಿರುವಾಗಲೇ, ಪ್ರಕರಣದ ಸಾಕ್ಷಿದಾರರಾದ ಸಂದೀಪ್ ಎಂಬುವವರಿಗೆ ವಾಟ್ಸಾಪ್ ಕರೆ ಮೂಲಕ ಬೆದರಿಕೆ ಹಾಕಲಾಗಿತ್ತು. ಈ ಕೃತ್ಯದ ಹಿಂದೆ ಪ್ರಮುಖ ಆರೋಪಿಗಳ ಕೈವಾಡವಿರುವುದು ತನಿಖೆಯಿಂದ ಬೆಳಕಿಗೆ ಬಂದಿತ್ತು
ಸಾಕ್ಷಿದಾರರಿಗೆ ಬೆದರಿಕೆ ಪೊಲೀಸರ ತಲೆ ನೋವು
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಹಾಸ್, ವೇಣು ಮತ್ತು ಪುನೀತ್ ಎಂಬುವವರನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಆದರೆ, ಕೃತ್ಯದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಗೌರವ್ ಶೆಟ್ಟಿ ತಲೆಮರೆಸಿಕೊಂಡಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಹಾಗೂ ಅವರ ಮೊಬೈಲ್ ಫೋನ್‌ಗಳನ್ನು ಜಾಲಾಡಿದಾಗ ಸ್ಫೋಟಕ ಅಂಶಗಳು ಹೊರಬಂದಿದ್ದವು. ಗೌರವ್ ಶೆಟ್ಟಿ ಹಾಗೂ ಕಿರಣ್ ರೆಡ್ಡಿ ಇಬ್ಬರೂ ಒಟ್ಟಾಗಿ ಕಾನ್ಫರೆನ್ಸ್ ಕರೆ (Conference Call) ಬಳಸಿ ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿರುವುದು ತಾಂತ್ರಿಕ ಸಾಕ್ಷ್ಯಗಳಿಂದ ದೃಢಪಟ್ಟಿತ್ತು. ಪೊಲೀಸರು ಬಲೆ ಬೀಸಿದಾಗ ಸಿಗದೆ ಗೌರವ್ ಶೆಟ್ಟಿ ತಲೆಮರೆಸಿಕೊಂಡಿದ್ದನು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಹಾಗೂ ಸಾಕ್ಷ್ಯ ಸಂಗ್ರಹಣೆ ಪ್ರಕ್ರಿಯೆ ಚಾಲ್ತಿಯಲ್ಲಿರುವಾಗಲೇ, ಪ್ರಕರಣದ ಸಾಕ್ಷಿದಾರರಾದ ಸಂದೀಪ್ ಎಂಬುವವರಿಗೆ ವಾಟ್ಸಾಪ್ ಕರೆ ಮೂಲಕ ಬೆದರಿಕೆ ಹಾಕಲಾಗಿತ್ತು. ಈ ಕೃತ್ಯದ ಹಿಂದೆ ಪ್ರಮುಖ ಆರೋಪಿಗಳ ಕೈವಾಡವಿರುವುದು ತನಿಖೆಯಿಂದ ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಹಾಸ್, ವೇಣು ಮತ್ತು ಪುನೀತ್ ಎಂಬುವವರನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಆದರೆ, ಕೃತ್ಯದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಗೌರವ್ ಶೆಟ್ಟಿ ತಲೆಮರೆಸಿಕೊಂಡಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು

