BIG NEWS: ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ವಿತರಣೆಗೆ ಮಾರ್ಗಸೂಚಿ

ಬೆಂಗಳೂರು: ಗೌರಿಗಣೇಶ ಹಬ್ಬದ ಹಿನ್ನೆಲೆಯಲ್ಲಿ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್‌ಗಳಲ್ಲಿ ಪ್ರಸಾದವಾಗಿ ವಿತರಿಸಲಾಗುವ ಆಹಾರ ಪದಾರ್ಥಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, FSSAI ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಪ್ರಸಾದ ಸಿದ್ಧಪಡಿಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶಿಸಿದೆ.

ಸೆ. 6, 7 ರಂದು ಗೌರಿ, ಗಣೇಶ ಹಬ್ಬವಿರುವುದರಿಂದ ಗಣೇಶ ಮೂರ್ತಿಗಳ ಪ್ರತಿಷ್ಟಾಪನೆ ಮಾಡಿದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುವ ಹಿನ್ನೆಲೆಯಲ್ಲಿ ಪ್ರಸಾದದ ನೈರ್ಮಲ್ಯತೆ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ಸಂದರ್ಭದಲ್ಲಿ FSSAI ನೊಂದಣಿ/ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಅಲ್ಲಿ ವಿನಿಯೋಗವಾಗುವ ಪ್ರಸಾದವನ್ನು ಸಿದ್ಧಪಡಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read