HomeKarnatakaಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎ5 ದಿಗ್ವೇಕರ್, ಎ 7ಹೆಚ್.ಎಲ್.ಸುರೇಶ್ ಹಾಗೂ ಎ17 ಕೆ.ಟಿ.ನವೀನ್ ಕುಮಾರ್ ಗೆ ಹೈಕೋರ್ಟ್ ಷರತ್ತುಬದ್ಧ ಜಾಮಿನು ಮಂಜೂರು ಮಾಡಿದೆ.

ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದು, ವಿಚಾರಣೆ ಮುಗಿಯದೇ ದೀರ್ಘ ಕಾಲ ಜೈಲಿನಲ್ಲಿ ಇಡುವಂತಿಲ್ಲ ಎಂಬ ತೀರ್ಪು ಇದೆ ಎಂದು ಆರೋಪಿಗಳ ಪರ ವಕೀಲ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ್ ಸಪ್ಪಣ್ಣವರ್ ವಾದ ಮಂಡಿಸಿದ್ದರು. ವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಎ 11 ಆರೋಪಿ ಮೋಹನ್ ನಾಯಕ್ ಗೆ ಜಾಮೀನು ಮ್ಂಜೂರಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular