HomeKarnatakaBIG NEWS: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

BIG NEWS: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ, ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಶ್ರೀಕಾಂತ್ ಪಂಗರ್ಕರ್ (48), ಶ್ರೀಕಾರಿಪುರದ ಸುಜಿತ್ ಕುಮಾರ್ (42) ಮಹಾರಾಷ್ಟ್ರದ ಸತಾರದ ಸುಧನ್ವ ಗ್ಪ್ಂಧಲೇಕರ್ (43) ಜಾಮೀನು ಪಡೆದವರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳಿಗೆ ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ, ವಿಚರಣೆಯ ಎಲ್ಲಾ ದಿನ ಆರೋಪಿಗಳು ವಿಚಾರಣೆಗೆ ಹಾಜರಗಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ. ಇಂತಹ ಪ್ರಕರಣಗಳಲ್ಲಿ ಭಾಗಿಯಾಗುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದೆ. ಆರೋಪಿಗಳು 2018ರಿಂದ ನ್ಯಾಯಾಂಗ ಬಂಧನದಲ್ಲಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular