ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠದ ಇತ್ತೀಚಿನ ಆದೇಶದಲ್ಲಿ, ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಕಿರಿಯ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ ಮೇಲ್ಮನವಿ ಆಲಿಸಿದ ನಂತರ ಹತ್ಯೆ ಪ್ರಕರಣದ ಆರೋಪಿಗಳು ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿ ವಿವರವಾದ ಪ್ರತಿಕ್ರಿಯೆ ಕೇಳಿದೆ.

ಕವಿತಾ ಲಂಕೇಶ್ ಅವರು ಪ್ರಕರಣದ ಆರೋಪಿ ಮೋಹನ್ ನಾಯಕ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಮಾಜಿ ಅರ್ಜಿ ಸಲ್ಲಿಸಿದ್ದರು. ಗೌರಿ ಹತ್ಯೆಯ ಕ್ರಿಮಿನಲ್ ಪಿತೂರಿಯ ಭಾಗವಾಗಿರುವ ಮೋಹನ್ ನಾಯಕ್‌ ಗೆ ನೀಡಲಾದ ಜಾಮೀನನ್ನು ರದ್ದುಗೊಳಿಸುವಂತೆ ನಿರ್ದೇಶನ ನೀಡುವಂತೆ ಕವಿತಾ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಆರೋಪಿ ಮೋಹನ್ ನಾಯಕ್ ಅವರು ಡಿಸೆಂಬರ್ 7, 2023 ರಂದು ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದ ಮೊದಲ ವ್ಯಕ್ತಿ. 2017 ರ ಸೆಪ್ಟೆಂಬರ್ 05 ರಂದು ಬೆಂಗಳೂರಿನಲ್ಲಿ ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ತನ್ನ ಆದೇಶದಲ್ಲಿ, ವಿಚಾರಣೆಯ ವಿಳಂಬವನ್ನು ಉಲ್ಲೇಖಿಸಿ ನಾಯಕ್‌ಗೆ ಜಾಮೀನು ಮಂಜೂರು ಮಾಡಿತ್ತು. ವಿಶೇಷ ತನಿಖಾ ತಂಡ(ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ. ನಾಯಕ್ ಪ್ರಕರಣದಲ್ಲಿ 11ನೇ ಆರೋಪಿಯಾಗಿದ್ದು, ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read