HomeEntertainmentಆಗಸ್ಟ್ 15ಕ್ಕೆ ತೆರೆ ಮೇಲೆ ಬರಲಿದೆ 'ಗೌರಿ'

ಆಗಸ್ಟ್ 15ಕ್ಕೆ ತೆರೆ ಮೇಲೆ ಬರಲಿದೆ ‘ಗೌರಿ’

ತನ್ನ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಇಂದ್ರಜಿತ್ ಲಂಕೇಶ್ ಅವರ ಪುತ್ರ  ಸಮರ್ಜಿತ್ ಅಭಿನಯದ ಬಹುನಿರೀಕ್ಷಿತ ‘ಗೌರಿ’ ಚಿತ್ರ ಆಗಸ್ಟ್ 15ರಂದು ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರ ತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.

ಇಂದ್ರಜಿತ್ ಲಂಕೇಶ್ ಚಿತ್ರವನ್ನು ನಿರ್ದೇಶಿಸಿದ್ದು, ಸಮರ್ಜಿತ್ ಲಂಕೇಶ್ ಹಾಗೂ ಸಾನ್ಯಾ ಅಯ್ಯರ್ ಪ್ರಮುಖ ಪಾತ್ರದಲ್ಲಿದ್ದಾರೆ. ಮಾನಸಿ ಸುಧೀರ್, ಸಂಪತ್ ಮೈತ್ರೇಯ, ಲೂಸ್ ಮಾದ ಯೋಗಿ, ರಾಜೀವ್ ಪಿಳ್ಳೈ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಎ.ವಿ. ಕೃಷ್ಣ ಕುಮಾರ್ ಛಾಯಾಗ್ರಹಣ, ಬಿ.ಎ ಮಧು, ರಾಜಶೇಖರ್ ಕೆ.ಎಲ್, ಮಾಸ್ತಿ , ಮನು ತಪಸ್ವಿ ಅವರ ಸಂಭಾಷಣೆ, ರವಿವರ್ಮ ಹಾಗೂ ಡಿಫ್ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಇದೆ. ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಬರ್ಗಿ, ಅನಿರುದ್ಧ ಶಾಸ್ತ್ರಿ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular