HomeEntertainmentಗೌರಿ ಚಿತ್ರದ ರೊಮ್ಯಾಂಟಿಕ್ ಮೆಲೋಡಿ ಹಾಡು ರಿಲೀಸ್

ಗೌರಿ ಚಿತ್ರದ ರೊಮ್ಯಾಂಟಿಕ್ ಮೆಲೋಡಿ ಹಾಡು ರಿಲೀಸ್

ಇಂದ್ರಜಿತ್ ಲಂಕೇಶ್ ನಿರ್ದೇಶನದ ಸಮರ್ಜಿತ್ ನಟನೆಯ ಗೌರಿ ಚಿತ್ರದ ಮುದ್ದಾದ ಎಂಬ ರೋಮ್ಯಾಂಟಿಕ್ ಮೆಲೋಡಿ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ, ಈ ಹಾಡಿಗೆ ನಿಹಾಲ್ ಟೌರೊ  ಧ್ವನಿಯಾಗಿದ್ದು, ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಕವಿರಾಜ್ ಅವರ ಸಾಹಿತ್ಯವಿದೆ.

ಈ ಚಿತ್ರವನ್ನು ಇಂದ್ರಜಿತ್ ಲಂಕೇಶ್ ಅವರೇ ಲಾಫಿಂಗ್ ಬುದ್ಧ ಫಿಲಂಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ಸಮರ್ಜಿತ್ ಲಂಕೇಶ್ ಹಾಗೂ ಸಾನ್ಯಾ ಅಯ್ಯರ್ ಮುಖ್ಯ  ಭೂಮಿಕೆಯಲ್ಲಿದ್ದಾರೆ. ಇನ್ನುಳಿದಂತೆ ಮಾನಸಿ ಸುಧೀರ್, ಸಂಪತ್ ಮೈತ್ರೇಯ, ಲೂಸ್ ಮಾದ ಯೋಗಿ, ರಾಜೀವ್ ಪಿಳ್ಳೈ  ತೆರೆ ಹಂಚಿಕೊಂಡಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ಎ.ವಿ.ಕೃಷ್ಣ ಕುಮಾರ್ ಛಾಯಾಗ್ರಹಣ, ರವಿವರ್ಮ ಹಾಗೂ ಡಿಫ್ರೆಂಟ್ ‍ ಡ್ಯಾನಿ ಅವರ ಸಾಹಸ ನಿರ್ದೇಶನ, ಮೋಹನ್ ಭಜರಂಗಿ ನೃತ್ಯ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular