HomeLatest NewsBIG BREAKING: 'ಟೀಮ್ ಇಂಡಿಯಾ' ನೂತನ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ

BIG BREAKING: ‘ಟೀಮ್ ಇಂಡಿಯಾ’ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ

ಈವರೆಗೆ ‘ಟೀಮ್ ಇಂಡಿಯಾ’ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಇತ್ತೀಚೆಗಷ್ಟೇ ನಡೆದ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿಯೇ ಮುಂದಿನ ದಿನಗಳಲ್ಲೂ ಅವರೇ ಟೀಮ್ ಇಂಡಿಯಾ ಕೋಚ್ ಆಗಿ ಮುಂದುವರೆಯಲಿದ್ದಾರಾ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಟೀಮ್ ಇಂಡಿಯಾದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಬಿಸಿಸಿಐನಿಂದ ಅಧಿಕೃತ ಪ್ರಕಟಣೆ ಅಷ್ಟೇ ಹೊರ ಬೀಳಬೇಕಿದೆ. ಕೋಚ್ ಆಯ್ಕೆ ಹುದ್ದೆಗೆ ಗೌತಮ್ ಗಂಭೀರ್ ಜೊತೆ ಡಬ್ಲ್ಯೂ.ವಿ. ರಮಣ್ ಸ್ಪರ್ಧೆಯಲ್ಲಿದ್ದು, ಅಂತಿಮವಾಗಿ ಗೌತಮ್ ಗಂಭೀರ್ ಅವರಿಗೆ ಹುದ್ದೆ ಒಲಿದಿದೆ ಎಂದು ತಿಳಿದುಬಂದಿದೆ.

ಇದರ ಮಧ್ಯೆ ಬಿಸಿಸಿಐ ಕಾರ್ಯದರ್ಶಿಯಾಗಿರುವ ಜಯ್ ಷಾ, ಸದ್ಯದಲ್ಲೇ ಐಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಬಿಸಿಸಿಐ ಚುಕ್ಕಾಣಿ ಯಾರ ಕೈಗೆ ಸಿಗಲಿದೆ ಎಂಬುದು ಸಹ ಕುತೂಹಲ ಕೆರಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular