HomeLatest Newsಗೌತಮ್ ಗಂಭೀರ್ ಸಹಾಯಕ ಸಿಬ್ಬಂದಿ ಮೇಲೆ ಬಿಸಿಸಿಐ ಕಣ್ಣು: ಪ್ರಮುಖ ನಿರ್ಧಾರ ಕೈಗೊಳ್ಳಲು ಬೋರ್ಡ್ ಸಜ್ಜು!

ಗೌತಮ್ ಗಂಭೀರ್ ಸಹಾಯಕ ಸಿಬ್ಬಂದಿ ಮೇಲೆ ಬಿಸಿಸಿಐ ಕಣ್ಣು: ಪ್ರಮುಖ ನಿರ್ಧಾರ ಕೈಗೊಳ್ಳಲು ಬೋರ್ಡ್ ಸಜ್ಜು!

ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗಳಲ್ಲಿ ಭಾರತೀಯ ಕ್ರಿಕೆಟ್ ತಂಡ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ, ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮುಂದಿನ ತಿಂಗಳ ಆರಂಭದಲ್ಲಿ ಪರಾಮರ್ಶನಾ ಸಭೆ ನಡೆಸಲು ನಿರ್ಧರಿಸಿದೆ. ಪ್ರಧಾನ ತರಬೇತುದಾರ ಗೌತಮ್ ಗಂಭೀರ್ ಅವರ ಗೈಡ್‌ಲೈನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಸಿಬ್ಬಂದಿಯ ಭವಿಷ್ಯ ಈ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆಯಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ತಂಡ ಐರ್ಲೆಂಡ್ ವಿರುದ್ಧ 2-0 ಅಂತರದಲ್ಲಿ ಸರಣಿ ಸೋಲು ಕಂಡಿದ್ದರೆ, ಇಂಗ್ಲೆಂಡ್ ವಿರುದ್ಧ 4-0 ಅಂತರದಲ್ಲಿ ಆಘಾತ ಎದುರಿಸಿತ್ತು. ಆದರೆ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಅಯ್ಯರ್ ಸಾರಥ್ಯದ ಪಡೆ ಗೆಲುವಿನ ಹಾದಿಗೆ ಮರಳಿದೆ. ಅಗಸ್ಟ್‌ನಲ್ಲಿ ನಡೆಯಲಿರುವ ಪರಿಶೀಲನಾ ಸಭೆಯಲ್ಲಿ ತಂಡದ ಪ್ರದರ್ಶನ ಹಾಗೂ ಸಹಾಯಕ ಸಿಬ್ಬಂದಿಯ ಒಪ್ಪಂದದ ಬಗ್ಗೆ ಪ್ರಮುಖ ಚರ್ಚೆಗಳು ನಡೆಯಲಿವೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಮಾತನಾಡಿದ ದೇವಜಿತ್ ಸೈಕಿಯಾ, ವಿದೇಶಿ ಪ್ರವಾಸದಲ್ಲಿ ತಂಡ ಅನುಭವಿಸಿದ ಸೋಲು ಕೇವಲ ತಾತ್ಕಾಲಿಕ ಹಿನ್ನಡೆಯಷ್ಟೇ. ಟಿ20 ಮಾದರಿಯಲ್ಲಿ ತಂಡದ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿ ಇರಲಿಲ್ಲವಾದರೂ, ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಹಜವಾಗಿದ್ದು, ಸರಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದೆಡೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಬಿಸಿಸಿಐಗೆ ಎಚ್ಚರಿಕೆ ನೀಡಿದ್ದು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಲಹೆ ನೀಡಿದ್ದಾರೆ. ಕೆಲವೇ ತಿಂಗಳ ಹಿಂದೆ ಭಾರತ ತಂಡ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿರುವುದನ್ನು ನೆನಪಿಸಿರುವ ಅವರು, ಫ್ಲಾಟ್ ಪಿಚ್‌ಗಳಲ್ಲಿ ಪಂದ್ಯಗಳನ್ನಾಡಿ ಆಟಗಾರರ ತಾಂತ್ರಿಕ ಸಾಮರ್ಥ್ಯದ ಮೇಲೆ ಪ್ರಭಾವ ಬಿದ್ದಿರಬಹುದು ಎಂದು ವಿಶ್ಲೇಷಿಸಿದ್ದಾರೆ. ಶಾರ್ಟ್ ಬಾಲ್‌ಗಳನ್ನು ಎದುರಿಸುವಾಗ ಆಟಗಾರರ ಫುಟ್‌ವರ್ಕ್ ಸರಿ ಇಲ್ಲದಿರುವುದು ಈ ಸಮಸ್ಯೆಗೆ ಮೂಲ ಕಾರಣ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular