HomeKarnatakaBREAKING: ಗವಿಸಿದ್ದೇಶ್ವರ ಸ್ವಾಮೀಜಿಗೆ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಶಿವರಾಜ್ ತಂಗಡಗಿ

BREAKING: ಗವಿಸಿದ್ದೇಶ್ವರ ಸ್ವಾಮೀಜಿಗೆ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕೊಪ್ಪಳದ ಗವ ಮಠದ ಗವಿಸಿದ್ದೇಶ್ವರ ಶ್ರೀಗಳಿಗೆ ಮೈಸೂರು ದಸರಾ ಉದ್ಘಾಟನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.

ಕೊಪ್ಪಳದ ಗವಿ ಮಠಕ್ಕೆ ತೆರಳಿದ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಇತರ ನಾಯಕರು ಗವಿಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿಯಾಗಿ ಮೈಸೂರು ದಸರಾ ಉದ್ಘಾಟನೆಗೆ ಆಗಮಿಸುವಂತೆ ಆಹ್ವಾನ ನೀಡಿದರು. ಈ ವೇಳೆ ಶ್ರೀಗಳು ಬಹಳ ಸಂತೋಷದಿಂದಲೇ ಸರ್ಕಾರದ ಆಹ್ವಾನವನ್ನು ಒಪ್ಪಿದ್ದು, ದಸರಾ ಉದ್ಘಾಟನೆಗೆ ಬರುವುದಗಿ ತಿಳಿಸಿದ್ದಾರೆ.

ಗವಿಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕೇಸ್ ದಾಖಲು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಸರಾ ಉದ್ಘಾಟನೆಗೆ ಬರಲು ನಿರಾಕರಿಸಿರುವುದಾಗಿ ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಲಾಗಿದ್ದ ಸುಳ್ಳು ಸುದ್ದಿ ವಿರುದ್ಧ ಕೊಪ್ಪಳ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಗವಿಸಿದ್ದೇಶ್ವರ ಮಠದ ಶ್ರೀಗಳ ಬಗ್ಗೆ ಕಿಡಿಗೇಡಿಗಳು ಹಬ್ಬಿಸಿರುವ ಸುಳ್ಳು ಸುದ್ದಿ ಹಾಗೂ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಡಿಜಿಟಲ್​ ಚಾನೆಲ್​​ವೊಂದರ ವಿರುದ್ದ ಕೊಪ್ಪಳ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಶ್ರೀಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಅಪಪ್ರಚಾರ ಮಾಡಲಾಗುತ್ತಿದೆ. ಈ ಬಾರಿಯ ದಸರಾ ಮಹೋತ್ಸವವನ್ನು ಗವಿಮಠದ ಶ್ರೀಗಳು ಉದ್ಘಾಟಿಸಲಿದ್ದಾರೆ ಎಂದು ಅಧಿವೇಶನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಘೋಷಿಸಿದ್ದರು. ಆದರೆ, ‘ಶ್ರೀಗಳು ದಸರಾ ಉದ್ಘಾಟನೆಯನ್ನು ತಿರಸ್ಕರಿಸಿದ್ದಾರೆ, ಕಾರ್ಖಾನೆಗಳ ವಿಚಾರವಾಗಿ ಕೊಪ್ಪಳವನ್ನು ರಕ್ಷಣೆ ಮಾಡಿದರೆ ಮಾತ್ರ ಉದ್ಘಾಟನೆಗೆ ಬರುವುದಾಗಿ ಶ್ರೀಗಳು ಸರ್ಕಾರಕ್ಕೆ ಷರತ್ತು ವಿಧಿಸಿದ್ದಾರೆ’ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ಇನ್ನು ಸುಳ್ಳು ಸುದ್ದಿ ಹರಡುತ್ತಿದ್ದಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮತ್ತು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿ, ‘ಇದು ಶುದ್ಧ ಸುಳ್ಳು ಮಾಹಿತಿ’ ಎಂದು ಸ್ಪಷ್ಟಪಡಿಸಿದ್ದರು.

ಗವಿಮಠದ ಶ್ರೀಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಕೊಪ್ಪಳ ಪೊಲೀಸರು ಮುಂದಾಗಿದ್ದು, ಕೊಪ್ಪಳ ನಗರ ಠಾಣೆಯ ಇನ್‌ಸ್ಪೆಕ್ಟರ್ ಸುರೇಶ್ ಅವರ ದೂರಿನ ಮೇರೆಗೆ ಡಿಜಿಟಲ್​ ಚಾನೆಲ್​​ವೊಂದರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದೇ ವೇಳೆ ಸಾರ್ವಜನಿಕ ಶಾಂತಿ ಕದಡುವ ಹಾಗೂ ಗಣ್ಯರ ವಿರುದ್ಧ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಭಾಗ್ಲಾ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದಸರಾ ಉದ್ಘಾಟಕರ ಹೆಸರನ್ನು ಘೋಷಣೆ ಮಾಡಿದ ದಿನ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳು ಮೌನ ಅನುಷ್ಠಾನದಲ್ಲಿದ್ದರು. ಶ್ರೀಗಳು ಮಠಗ್ಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಇಂದು ಸಚಿವ ಶಿವರಾಜ್ ತಂಗಡಗಿ ಶ್ರೀಗಳನ್ನು ಭೇಟಿಯಾಗಿ ಅಧಿಕೃತವಾಗಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಸ್ವಾಮೀಜಿಗಳು ಸಂತಸದಿಂದ ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular