HomeLatest Newsಕೋರ್ಟ್ ನಿರ್ದೇಶನದಂತೆ ಜಿಬಿಎ ಚುನಾವಣೆ ನಡೆಯಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕೋರ್ಟ್ ನಿರ್ದೇಶನದಂತೆ ಜಿಬಿಎ ಚುನಾವಣೆ ನಡೆಯಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಜಿಬಿಎ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಜಿಬಿಎ ಚುನಾವಣೆ ವಿಚಾರವಾಗಿ ಮಾತನಾಡುತ್ತಾ, ಕೋರ್ಟ್ ಸೂಚನೆಯಂತೆ ನಡೆಯಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಬಿಎ ಆದಾಯದ ವಿಚಾರವಾಗಿ, ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕು ರಕ್ಷಣೆ ಮಾಡಬೇಕು. ‘ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ, ವಿದೇಶ ಪ್ರಯಾಣ ಬೇಡ’ ಎಂದು ಹೇಳುವ ಕಷ್ಟ ಕಾಲದಲ್ಲಿ ಜನರಿಗೆ ಒಳ್ಳೆಯದಾಗಬೇಕು ಎಂದು ತಿಳಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೀಟ್ ಪರೀಕ್ಷೆ ರದ್ದಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ದೊಡ್ಡ ಅಪಮಾನವಾಗಿದ್ದು, ಕೇಂದ್ರ ಸಚಿವರು ಹಾಗೂ ಸಂಸದರು ಇದಕ್ಕೆ ಉತ್ತರಿಸಬೇಕು. ಇದೇ ಪ್ರಕರಣ ನಮ್ಮ ರಾಜ್ಯದಲ್ಲಿ ಆಗಿದ್ದರೆ ಇಷ್ಟು ಹೊತ್ತಿಗೆ ನಮ್ಮ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿದ್ದರು. ಅನೇಕ ಕನಸು ಕಟ್ಟಿಕೊಂಡು ಕಷ್ಟಪಟ್ಟಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶಗೊಂಡಿದ್ದಾರೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular