ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಜಿಬಿಎ ಚುನಾವಣೆಗೆ ಇಂದಿನಿಂದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಲಭ್ಯವಿರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮೀಸಲಾತಿ ನಿಗದಿಯಾದ ಮೇಲೆ ಜಿಬಿಎ ಚುನಾವಣೆಗೆ ತಯಾರಿ ನಡೆಸಿದರಾಯಿತು ಎಂದುಕೊಂಡರೆ ನೀವುಗಳು ಗೆಲ್ಲಲು ಸಾಧ್ಯವಿಲ್ಲ. ಏಕೆಂದರೆ ನೀವು ಎಷ್ಟೇ ದೊಡ್ಡ ನಾಯಕರಾದರೂ ಸಹ ಎಲ್ಲಾ ನಿಗದಿಯಾದಾಗ ಮಾಡುತ್ತೇನೆ ಎಂದರೆ ಈ ಡಿ.ಕೆ.ಶಿವಕುಮಾರ್ ನಿಮ್ಮನ್ನು ಗುರುತಿಸುವುದಿಲ್ಲ. ಇಂದಿನಿಂದ ಆಕಾಂಕ್ಷಿ ಅಭ್ಯರ್ಥಿಗಳ ಅರ್ಜಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು.
ಸಾಮಾನ್ಯ ಅಭ್ಯರ್ಥಿಗಳಿಗೆ 50 ಸಾವಿರ, ಪರಿಶಿಷ್ಟ ಅಭ್ಯರ್ಥಿಗಳಿಗೆ 25 ಸಾವಿರ. ಹಣ ಕಟ್ಟಡ ನಿಧಿಗೆ ಹೋಗಲಿದೆ. ಏಕೆಂದರೆ ಜಿಲ್ಲಾ ಕಚೇರಿ ನಿರ್ಮಾಣಕ್ಕೆ 20 ಕೋಟಿ, ರಾಜ್ಯ ಕಚೇರಿ ನಿರ್ಮಾಣಕ್ಕೆ 60 ಕೋಟಿ ಖರ್ಚಾಗಲಿದೆ. ತಾಲ್ಲೂಕು ಕಚೇರಿಗಳ ನಿರ್ಮಾಣಕ್ಕೂ ಕೆಪಿಸಿಸಿಯಿಂದ ಹಣ ನೀಡಬೇಕು ಎಂದರು.
ಎಂಎಲ್ ಎ ಚುನಾವಣೆ ವೇಳೆ 2 ಲಕ್ಷ ಹಣ ನಿಗದಿ ಮಾಡಲಾಗಿತ್ತು. ಇದರಿಂದ 20 ಕೋಟಿ ಹಣ ಸಂಗ್ರಹವಾಯಿತು. ಇದರಿಂದ ಪಕ್ಷದ ಪರವಾಗಿ ಜಾಹಿರಾತು ನೀಡಲು ಸಾಧ್ಯವಾಯಿತು. ಮಹಿಳೆಯರಿಗೆ ರಿಯಾಯಿತಿ ಇಲ್ಲ ಎಂದರು.

