HomeLive NewsBIG NEWS: ಜಿಬಿಎ 5 ನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಪ್ರಕಟ

BIG NEWS: ಜಿಬಿಎ 5 ನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ 5 ನಗರ ಪಾಲಿಕೆಗಳ ಚುನಾವಣೆಗೆ ಭಾರಿ ಸಿದ್ಧತೆ ನಡೆಯುತ್ತಿದೆ, ಈ ನಡುವೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ನಗರ ಪಾಲಿಕೆಯ ಮತಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದ ಮೇರೆಗೆ ಜಿಬಿಎ ಒಟ್ಟು 5 ನಗರ ಪಾಲಿಕೆಗಳ 369 ವಾರ್ಡ್‌ಗಳ ಅಂತಿಮ ಪಟ್ಟಿಯಲ್ಲಿ 88,95,361 ಮತದಾರರನ್ನು ಗುರುತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಮಾಹಿತಿ ನೀಡಿದ್ದು, ಒಟ್ಟು 88,95,361 ಮತದಾರರ ಪೈಕಿ ಪುರುಷ ಮತದಾರರು 45,69,752, ಮಹಿಳಾ ಮತದಾರರು 43,21,143, ಇತರೆ 1,633 ಮತದಾರರು ಇದ್ದಾರೆ. ಬೆಂಗಳೂರು ದಕ್ಷಿಣ ವಾರ್ಡ್ 51 (ಸುಬ್ರಮಣ್ಯಪುರ)ರಲ್ಲಿ ಅತಿ ಹೆಚ್ಚು ಅಂದರೆ 54,026 ಮತದಾರರಿದ್ದಾರೆ. ಬೆಂಗಳೂರು ಪೂರ್ವ ವಾರ್ಡ್ 16(ಕೊತ್ತೂರು)ನಲ್ಲಿ 10,940 ಅತಿ ಕಡಿಮೆ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದ ಮೇರೆಗೆ ಕರಡು ಮತದಾರರ ಪಟ್ಟಿಯನ್ನ ಮಾರ್ಚ್ 9ರಂದು ಬಿಡುಗಡೆ ಮಾಡಲಾಗಿತ್ತು. ಸಾರ್ವಜನಿಕ ಆಕ್ಷೇಪಣೆಗಳಿಗೆ ಅವಕಾಶ ನೀಡಲಾಗಿತ್ತು. ಆಕ್ಷೇಪಣೆ ಬಂದ ಬಳಿಕ ಎಲ್ಲವನ್ನು ಪರಿಶೀಲನೆ ಮಾಡಿ ಸರಿಪಡಿಸಲಾಗಿದೆ. ಇದೀಗ ಅಂತಿಮ‌ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಅಂತಿಮ ಮತದಾರರ ಪಟ್ಟಿಯಲ್ಲಿ 88,95,361 ಮತದಾರರನ್ನ ಗುರುತು ಮಾಡಲಾಗಿದೆ. ಒಟ್ಟು 369 ವಾರ್ಡ್‌ಗಳಿವೆ ಎಂದು ತಿಳಿಸಿದ್ದಾರೆ.

ಜೂನ್ ಅಂತ್ಯದೊಳಗೆ ಜಿಬಿಎ ಚುನಾವಣೆ ಮಾಡಿ ಮುಗಿಸುವಂತೆ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಆದರೆ ಸದ್ಯ ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಸರ್ಕಾರ ಆಯೋಗಕ್ಕೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ಜಿಬಿಎ ಚುನಾವಣೆ ಮುಂದೂದಲಾಗುತ್ತದೆಯೇ? ಅಥವಾ ಜೂನ್ ಅಂತ್ಯದೊಳಗೆ ನಡೆಯಲಿದೆಯೇ? ಎಂಬುದನ್ನು ಕಾದುನೊಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular