ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಅಧಿಕಾಅರದ ಚುನಾಅವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಈ ಬಾರಿ ರಾಜ್ಯ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಮುಂದಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಜಿಬಿಎ ಚುನಾವಣೆಗೆ ಬ್ಯಾಲೆಟ್ ಪೇಪರ್ ಕೈ ಬಿಟ್ಟು ಇವಿಎಂನಲ್ಲೇ ಚುನಾವಣೆ ನಡೆಸುವಂತೆ ಒತ್ತಾಯ ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ಆಂದೋಲನ ಕೂಡ ಶುರುವಾಗಿದೆ.
ಜಿಬಿಎ ಪಾಲಿಕೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಕೆಲಸ ಕಾರ್ಯಗಳು ಚುರುಕುಗೊಂಡಿವೆ. ಮತದಾರರ ಅಂತಿಮ ಪಟ್ಟಿ ಹಾಗೂ ಚುನಾವಣಾ ದಿನಾಂಕ ಘೋಷಣೆ ಆಗೋದೊಂದೇ ಬಾಕಿ ಇದೆ. ಉಳಿದಂತೆ 369 ವಾರ್ಡ್ ಹಾಗೂ ಮೀಸಲಾತಿ ನಿಗದಿಯಾಗಿದೆ. ಆದರೆ ರಾಜ್ಯ ಚುನಾವಣ ಆಯೋಗ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಮುಂದಾಗಿರುವುದು ಸಾರ್ವಜನಿಕ ಸಂಘ, ಸಂಸ್ಥೆಗಳಿಂದ ಆಕ್ಷೇಪಕ್ಕೆ ಕಾರಣವಾಗಿದೆ.
ಬಿ ಪ್ಯಾಕ್, ಸಿಟಿಜನ್ಸ್ ಫಾರ್ ಸಿಟಿಜನ್ಸ್ ಸೇರಿದ ನಗರದ ಹಲವು ಸಂಘ, ಸಂಸ್ಥೆಗಳು ಬ್ಯಾಲೆಟ್ ಪೇಪರ್ಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಅಲ್ಲದೆ, ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿಗೆ ಈ ಬಗ್ಗೆ ಮನವಿಯನ್ನೂ ಮಾಡಿದ್ದು, ಬ್ಯಾಲೆಟ್ ಪೇಪರ್ ಕೈ ಬಿಟ್ಟು ಇವಿಎಂನ್ನೇ ಬಳಸುವಂತೆ ಒತ್ತಾಯಿಸಿವೆ. ತಂತ್ರಜ್ಞಾನದಲ್ಲಿ ಜಾಗತಿಕವಾಗಿ ಹೆಸರು ಮಾಡಿರುವ ಬೆಂಗಳೂರಿನ ಪಾಲಿಕೆ ಚುನಾವಣೆ ಬ್ಯಾಲೆಟ್ ಪೇಪರ್ನಲ್ಲಿ ನಡೆಸಿದರೆ ಅದು ಬೆಂಗಳೂರಿಗೆ ಅವಮಾನ ಮಾಡಿದಂತೆ ಎಂದು ಸಂಘ-ಸಂಸ್ಥೆಗಳು ವಾದಿಸಿವೆ.
ರಾಜ್ಯ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ನಲ್ಲಿಯೇ ಚುನಾವಣೆ ನಡೆಸಲು ನಿರ್ಧರಿಸಿದ್ದು, ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮಾರ್ಚ್ 26ಕ್ಕೆ ಶಾಲಾ ಮಕ್ಕಳ ಪರೀಕ್ಷೆ ಮುಕ್ತಾಯವಾಗಲಿದೆ. ಹೀಗಾಗಿ ಮಾರ್ಚ್ 16ಕ್ಕೆ ಮತದಾರರ ಅಂತಿಮ ಪಟ್ಟಿ ಬಿಡುಗಡೆಗೊಳಿಸಿ ಜೂನ್ 30ರ ಒಳಗಾಗಿ ನೂತನ ಕೌನ್ಸಿಲ್ ಸದಸ್ಯರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿರಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಬಾರಿ ಜಿಬಿಎ ಚುನಾವಣೆಯಲ್ಲಿ ಬ್ಯಾಅಲೆಟ್ ಪೇಪರ್ ಬಳಕೆ ನಿರ್ಧಾರ ಮುಂದುವರೆಯಲಿದೆಯೇ? ಕಾದುನೋಡಬೇಕಿದೆ.

