HomeLatest NewsBREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಮುಗಿಸಿ: ಸುಪ್ರೀಂಕೋರ್ಟ್ ನಿರ್ದೇಶನ

BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಮುಗಿಸಿ: ಸುಪ್ರೀಂಕೋರ್ಟ್ ನಿರ್ದೇಶನ

ನವದೆಹಲಿ: ಕಳೆದ ಹತ್ತು ವರ್ಷಗಳಿಂದ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆಯೇ ನಡೆದಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೋಗಿ ಈಗ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿದ್ದು, 5 ಪಾಲಿಕೆಗಳು ರೂಪುಗೊಂಡಿವೆ. ಬೆಂಗಳೂರಿನ ಐದು ಪಾಲಿಕೆಗಳಿಗೆ ಕೂಡಲೇ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ಜೂನ್ 30ರೊಳಗೆ ಜಿಬಿಎ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಜಿಬಿಎ ಚುನಾವಣೆಗಾಗಿ ಈಗಾಗಲೇ ಮೀಸಲಾತಿ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಮಾರ್ಚ್ 16ರೊಳಗೆ ಮತದಾರರ ಪಟ್ಟಿ ಅಂತಿಮಗೊಳಿಸಲಾಗುವುದು. ಮಾರ್ಚ್ ನಿಂದ ಎಸ್.ಎಸ್.ಎಲ್.ಸಿ ಸೇರಿದಂತೆ ಇತರ ಪರೀಕ್ಷೆಗಳು ಆರಂಭವಾಗುತ್ತವೆ. ಮೇ 26ರೊಳಗೆ 5 ಪಾಲಿಕೆಗಳ ಚುನಾವಣೆ ದಿನಾಂಕ ಘೋಷಿಸಲಾಗುವುದು. ಜೂನ್ ತಿಂಗಳೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸರ್ಕಾರದ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸುಪ್ರೀಮ್ ಕೋರ್ಟ್ ಗೆ ಮಾಹಿತಿ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣಾ ಆಯೋಗದ ಪರ ಕೆ.ಎಸ್ ಫಣೀಂಧ್ರ ವಾದ ಮಂಡಿಸಿದರು. ಫೆಬ್ರವರಿ 20ರೊಳಗೆ ಅಂತಿಮ ಮೀಸಲಾತಿ ಹೊರಡಿಸಲು ಸರ್ಕಾರಕ್ಕೆ ಸೂಚನೆ ನೀಡಿದ ಸುಪ್ರೀಂ ಕೋರ್ಟ್, ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular