HomeKarnatakaನಕಲಿ ಅಂಕಪಟ್ಟಿ ನೀಡಿ ಅಂಚೆ ಸೇವಕರ ಹುದ್ದೆ ಪಡೆದಿದ್ದ 14 ಮಂದಿ ವಿರುದ್ಧ ಕೇಸ್ ದಾಖಲು

ನಕಲಿ ಅಂಕಪಟ್ಟಿ ನೀಡಿ ಅಂಚೆ ಸೇವಕರ ಹುದ್ದೆ ಪಡೆದಿದ್ದ 14 ಮಂದಿ ವಿರುದ್ಧ ಕೇಸ್ ದಾಖಲು

ಶಿರಸಿ: ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಕಲಿ ಅಂಕಪಟ್ಟಿ ಆಧಾರ ನೀಡಿ ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಆಯ್ಕೆಯಾಗಿದ್ದ 14 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಚೆ ನಿರೀಕ್ಷಕ ಮಂಜುನಾಥ ದೊಡ್ಡಮನಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 2023ರಲ್ಲಿ ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕರ ಹುದ್ದೆ ನೇಮಕಾತಿ ಪ್ರಕ್ರಿಯೆ ನಡೆದಿದ್ದು, 14 ಮಂದಿ ನಕಲಿ ಅಂಕಪಟ್ಟಿ ಹಾಜರುಪಡಿಸಿ ವಂಚನೆಯಿಂದ ಹುದ್ದೆ ಪಡೆದುಕೊಂಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular