HomeLatest NewsBREAKING: ಇನ್ಮುಂದೆ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಗೀತಾ ಶಿವರಾಜ್ ಕುಮಾರ್ ಘೋಷಣೆ

BREAKING: ಇನ್ಮುಂದೆ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಗೀತಾ ಶಿವರಾಜ್ ಕುಮಾರ್ ಘೋಷಣೆ

ಶಿವಮೊಗ್ಗ: ಇನ್ಮುಂದೆ ನಾನು ಯಾವುದೇ ಚುನಾವಣೆಯಲ್ಲಿಯೂ ಸ್ಪರ್ಧಿಸಲ್ಲ ಎಂದು ಗೀತಾ ಶಿವರಾಜ್ ಕುಮಾರ್ ಘೋಷಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಗೀತಾ ಶಿವರಾಜ್ ಕುಮಾರ್, ನಾನು ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಆದರೆ ನಿಮ್ಮೆಲ್ಲರ ಜೊತೆ ನಿಲ್ಲುತ್ತೇನೆ. ಮುಂದಿನ ಚುನಾವಣೆಗೆ ಬಂದು ಕ್ಯಾಪೇಂನ್ ಮಾಡುತ್ತೇನೆ ಎಂದು ಹೇಳಿದರು.

ನಾನು ಚುನಾವಣೆಗೆ ಸ್ಪರ್ಧುಸಿ ಮಂಜುನಾಥ್ ಬಂಡಾರಿಗೆ ತೊಂದರೆ ಕೊಡುವುದಿಲ್ಲ. ಚುನಾವಣೆಯಲ್ಲಿ ನಿಲ್ಲುವುದಿಲ್ಲ. ನಿಮ್ಮ ಕಷ್ಟಗಳಿಗೆ ನಾನು ಸದಾ ಸ್ಪಂದಿಸುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಶ್ವೇತಾ ಬಂಡಿ ಅವರನ್ನು ನಾನು ಕಳೆದ ಹತ್ತುವರ್ಷಗಳಿಂದ ಬಲ್ಲೆ. ಮಹಿಳೆಯರು ಯಾರೂ ಅಬಲೆಯೆರಲ್ಲ, ಎಲ್ಲರೂ ಸಬಲೆಯರು. ಮಹಿಳೆಯರಿಗೆ ಶಕ್ತಿ ನೀಡಿದರೆ ಎಂತಹ ಕೆಲಸವನ್ನಾದರೂ ಮಾಡುತ್ತಾರೆ ಎಂದು ಹೇಳಿದರು. ಇದೇ ವೇಳೆ ಏನೇ ಸಮಸ್ಯೆ, ಕಷ್ಟಗಳಿದ್ದರೂ ಸಚಿವ ಮಧು ಬಂಗಾರಪ್ಪ ಅವರನ್ನು ಹಿಡಿದುಕೊಂಡು ಕೆಲಸ ಮಾಡಿಸಿಕೊಳ್ಳಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular