‘ಕಾಂಗ್ರೆಸ್ ಗ್ಯಾರಂಟಿʼ ಜನರ ನಾಡಿಮಿಡಿತಕ್ಕೆ ಹತ್ತಿರವಾಗಿವೆ: ಗೀತಾ ಶಿವರಾಜ್‌ ಕುಮಾರ್

ಶಿವಮೊಗ್ಗ: ‘ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ನಾಡಿಮಿಡಿತಕ್ಕೆ ಹತ್ತಿರವಾಗಿವೆ’ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಮೇಲಿನ ಹನಸವಾಡಿ ಹಾಗೂ ಬೇಡರಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂಗೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಗ್ರಾಮ ಪಂಚಾಯತಿ ಮಟ್ಟದ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಿತ ಕಾಪಾಡುತ್ತಿದೆ. ಇಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವರಿಂದ ಅಪಪ್ರಚಾರ ನಡೆಸಲಾಗುತ್ತಿದೆ. ಆದರೆ, ಎಲ್ಲ ಯೋಜನೆಗಳೂ ಯಶಸ್ವಿಯಾಗಿ ನಡೆಯುತ್ತಿವೆ ಎಂದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಇಲ್ಲಿ ಆರಾಧನ, ಆಶ್ರಯದಂತಹ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ನಾನು ಸಾಗುತ್ತೇನೆ ಎಂದು ಭರವಸೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read