BIG NEWS: ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸ್ಪರ್ಧೆ

Karnataka Assembly Election Geetha Shivarajkumar Joins Congress And Leave  JDS Daughter In Law Actor Rajkumar Wife Of Shiva Rajkumar | Karnataka  Election 2023: एक्टर शिवराजकुमार की पत्नी गीता कांग्रेस में हुईं ...ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಲಿದ್ದಾರೆ.

ಈ ಹಿಂದೆ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಗೀತಾ ಶಿವರಾಜಕುಮಾರ್ ಪರಾಭವಗೊಂಡಿದ್ದರು. ಈ ಬಾರಿ ಅವರು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ಅವರ ಸಹೋದರ ಮಧು ಬಂಗಾರಪ್ಪ ಈ ಬಗ್ಗೆ ಸುಳಿವು ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಮಧು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಅಕ್ಕ ಹೇಳಿರುವುದು ನಿಜ. ಆದರೆ, ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಹೈಕಮಾಂಡ್ ನಾಯಕರಿಗೆ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಲಿ ಎಂಬ ಆಕಾಂಕ್ಷೆ ಇದೆ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಶಿವರಾಜ್ ಕುಮಾರ್ ವರನಟ ಡಾ. ರಾಜಕುಮಾರ್ ಕುಟುಂಬದ ಹಿರಿಯ ಸೊಸೆಯಾಗಿದ್ದಾರೆ. ಈ ಬಾರಿ ಅವರು ಕಾಂಗ್ರೆಸ್ ನಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read