HomeKarnatakaಇಂದು ರಂಜಾನ್ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಣೆ

ಇಂದು ರಂಜಾನ್ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಣೆ

ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಇಂದು ರಂಜಾನ್ ಆಚರಿಸಲಾಗುವುದು. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಂಜಾನ್ ಆಚರಿಸಲಾಗುವುದು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶಿಸಿದ್ದಾರೆ.

ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ರಂಜಾನ್ ಆಚರಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾರ್ಚ್ 20ರಂದು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಚಂದ್ರ ದರ್ಶನ ಹಿನ್ನೆಲೆಯಲ್ಲಿ ರಂಜಾನ್ ಉಪವಾಸ ವ್ರತ ಕೊನೆಯಾಗಿದೆ. ಶುಕ್ರವಾರ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಯ ಮೂಲಕ ರಂಜಾನ್ ಹಬ್ಬ ಆಚರಿಸಲಾಗುವುದು.

ದಕ್ಷಿಣ ಕನ್ನಡ ಜಿಲ್ಲಾ ಖಾಜಿ ಅಲ್ ಹಾಜ್ ತ್ವಾಕಾ ಅಹಮದ್ ಮುಸ್ಲಿಯಾರ್, ಶುಕ್ರವಾರ ರಂಜಾನ್ ಹಬ್ಬ ಆಚರಣೆ ಘೋಷಣೆ ಮಾಡಿದ್ದಾರೆ. ಕಳೆದ ಒಂದು ತಿಂಗಳಿಂದ ಮುಸ್ಲಿಮರು ಉಪವಾಸ ಆಚರಿಸಿದ್ದರು. ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಪವಾಸ ವ್ರತ ಕೊನೆಯಾಗಿದ್ದು, ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಯ ಮೂಲಕ ಹಬ್ಬ ಆಚರಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular