ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ದಿಗಟೆಕೊಪ್ಪ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ ಸ್ಫೋಟಗೊಂಡು ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಲೋಕೇಶ್ ಗಾಯಗೊಂಡ ಯುವಕ. ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಮಾಸ್ತಿಕಂಬ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಯುವಕ ಚಿಕಿತ್ಸೆ ಬಳಿಕ ಯುವಕ ಲೋಕೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.