HomeLatest NewsBIG NEWS: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮೀನುಗಾರಿಕಾ ಇಲಾಖೆ ರಾಜ್ಯ ಸಚಿವ ಜಾರ್ಜ್ ಕುರಿಯನ್...

BIG NEWS: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮೀನುಗಾರಿಕಾ ಇಲಾಖೆ ರಾಜ್ಯ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮೀನುಗಾರಿಕೆ ಇಲಾಖೆಯ ರಾಜ್ಯ ಸಚಿವ, ಹಿರಿಯ ಬಿಜೆಪಿ ನಾಯಕ ಜಾರ್ಜ್ ಕುರಿಯನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜಾರ್ಜ್ ಕುರಿಯನ್ ಅವರ ಆರು ವರ್ಷಗಳ ರಾಜ್ಯಸಭಾ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕುರಿಯನ್ ರಾಜೀನಾಮೆ ಅಂಗೀಕಾರವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 75ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾರ್ಜ್ ಕುರಿಯನ್ ಅವರ 6 ವರ್ಷಗಳ ರಾಜ್ಯಸಭಾ ಸದಸ್ಯತ್ವದ ಅವಧಿ ಮುಗಿದಿರುವುದರಿಂದ ಅವರು ನಿಯಮಾನುಸಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನದ ಕಾರಣದಿಂದಾಗಿ, ಈ ಬಾರಿ ಅವರನ್ನು ಮತ್ತೆ ರಾಜ್ಯಸಭೆಗೆ ಮರು ನಾಮನಿರ್ದೇಶನ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ

ಮೂಲತಃ ಕೇರಳದ ಕೊಟ್ಟಾಯಂ ಜಿಲ್ಲೆಯವರಾದ ಜಾರ್ಜ್ ಕುರಿಯನ್ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿಯೂ ಕೆಲಸ ಮಾಡಿದ್ದಾರೆ. 1980 ರಲ್ಲಿ ಬಿಜೆಪಿ ಪಕ್ಷ ಸ್ಥಾಪನೆಯಾದಾಗಿನಿಂದಲೂ ಅವರು ಸಕ್ರಿಯ ಸದಸ್ಯರಾಗಿದ್ದಾರೆ. 2024 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಕುರಿಯನ್ ಅವರು ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಉಪಾಧ್ಯಕ್ಷರಾಗಿ ಮತ್ತು ಮಾಜಿ ಕೇಂದ್ರ ರೈಲ್ವೆ ರಾಜ್ಯ ಸಚಿವ ಓ. ರಾಜಗೋಪಾಲ್ ಅವರ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular