HomeKarnatakaBIG NEWS: ಜೆರೋಸಾ ಶಾಲೆ ಶಿಕ್ಷಕಿ ಕೇಸ್: ಪೋಷಕರಿಗೆ ಬೆದರಿಕೆ ಕರೆ ಪ್ರಕರಣ; FIR ದಾಖಲು

BIG NEWS: ಜೆರೋಸಾ ಶಾಲೆ ಶಿಕ್ಷಕಿ ಕೇಸ್: ಪೋಷಕರಿಗೆ ಬೆದರಿಕೆ ಕರೆ ಪ್ರಕರಣ; FIR ದಾಖಲು

ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆಯ ಶಿಕ್ಷಕಿಯಿಂದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ವಿದ್ಯಾರ್ಥಿನಿ ಪೋಷಕರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ.

ಜೆರೋಸಾ ಶಾಲೆಯ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಪೋಷಕರಿಗೆ ವಿದೇಶಗಳಿಂದ ಬೆದರಿಕೆ ಕರೆ ಬರುತ್ತಿರುವ ಬಗ್ಗೆ ಕವಿತಾ ಎಂಬ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ದೂರಿನ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಕಂಕನಾಡಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ವಿದೇಶದಿಂದ ಬೆದರಿಕೆ ಕರೆ ಬರುತ್ತಿರುವ ಬಗ್ಗೆ ಕವಿತಾ ಎಂಬ ಮಹಿಳೆ ಕಂಕನಾಡಿ ಪೊಲೀಸರಿಗೆ ಆಡಿಯೋ ರೆಕಾರ್ಡ್, ಸ್ಕ್ರೀನ್ ಶಾಟ್ ಸಮೇತ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ತನಿಖೆಗೆ ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular